ನಮಗೆ ಒಂದು ಹೈಕಮಾಂಡ್ ಇದೆ. ಈಗ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಮುಂದೆ ಸಿಎಂ ಯಾರನ್ನು ಮಾಡಬೇಕು ಎಂಬ ವಿಚಾರವಾಗಿ ನಾವು ಮಾತನಾಡುವುದಿಲ್ಲ. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.
ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಿರ್ಧಾರ ಮಾಡುವವರೆಗೆ ನಾವಾಗಲಿ, ಶಾಸಕರಾಗಿ ಈ ಬಗ್ಗೆ ಮಾತನಾಡುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ. ಸಿಎಂ ಬದಲಾವಣೆ ಮಾಡಲೇಬೇಕು ಎಂದರೇ ಹೈಕಮಾಂಡ್ ಮಾಡಲಿದೆ ಎಂದಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೂಕ್ತ ಸಮಯ ಬಂದಾಗ ತಿರ್ಮಾನ ಮಾಡುತ್ತಾರೆ. ಸಿಎಂ ಆಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದಾಗ ಯಾವ ಒಪ್ಪಂದ ಮಾಡಲಾಗಿದೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಇದರಲ್ಲಿ ಸುಖಾಸುಮ್ಮನೆ ಗೊಂದಲ ಬೇಡ. ಜನರಿಗೆ ತಪ್ಪು ಸಂದೇಶ ರವಾನೆ ಆಗಲಿದೆ ಎಂದಿದ್ದಾರೆ.


















