ತುಮಕೂರು: ಜಿಲ್ಲೆಯ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಿ.ಡಿ. ಪ್ರಭಾಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಚುನಾವಣೆ ಇಂದು ನಡೆದಿದ್ದು, ಸಿ.ಡಿ. ಪ್ರಭಾಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ಅಪೂರ್ವ ಸಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ವೇಳೆ ಅಭಿಮಾನಿಗಳು, ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಸಿ.ಡಿ. ಪ್ರಭಾಕರ್, ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರಿಗೂ ಹಾಗೂ ಮುಖಂಡರಿಗೆ ಧನ್ಯವಾದಗಳು. ಎಲ್ಲ ಸದಸ್ಯರ ಜೊತೆಗೂಡಿ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.
ಈ ವೇಳೆ ಗ್ರಾಪಂ ಉಪಾಧ್ಯಕ್ಷೆ ಸರಸ್ವತಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಎಸ್ಟಿ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೊಂದಿಹಳ್ಳಿ ರಂಗರಾಜು, ಮುಖಂಡ ಓಬಳರಾಜು, ಬಸವರಾಜು, ರಮೇಶ್, ರವಿಕುಮಾರ್, ಮಂಜುನಾಥ್, ಬಸವರಾಜು, ಮಧುಸೂದನ್, ಮಹೇಶ್, ಡಿ.ಎಂ. ಮಂಜುನಾಥ್ ಸೇರಿದಂತೆ ಹಲವರು ಇದ್ದರು.



















