ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಕುಟುಂಬಸ್ತರ ವಿರುದ್ಧ ದಾಖಲಿಸಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.
ಈ ಸಂಬಂಧಿಸಿದಂತೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ, ವಕೀಲ ಬಿ. ವಿನೋದ್ ಆವರು ಅಕ್ರಮ ಆಸ್ತಿ ಗಳಿಕೆಯ ಆರೋಪ ಮಾಡಿ ನನ್ನ ಹಾಗೂ ನನ್ನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಹಿಂದೆ ಅವರು ದಾಖಲಿಸಿದ ಒಂದು ಪ್ರಕರಣವೂ ಯಶಸ್ವಿ ಆದ ಉದಾಹರಣೆ ಇಲ್ಲ. ವಿನೋದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಹೇಳಿದ್ದಾರೆ.
ನನ್ನನ್ನು ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿತ್ತು. ಆದರೆ, ನ್ಯಾಯಾಲಯದಲ್ಲಿ ನನಗೆ ಆರಂಭಿಕ ಜಯ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.



















