ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿನ ಭೂಮಿ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತರ ನಿಯೋಗ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.
ಈ ವೇಳೆ ರೈತರ ನಿಯೋಗ ನಾಲ್ಕು ಷರತ್ತುಗಳನ್ನು ಹಾಕಿ ಸರ್ಕಾರಕ್ಕೆ ಜಮೀನು ನೀಡಲು ಒಪ್ಪಿಗೆ ನೀಡಿತು. ಈ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ತಜ್ಞರೊಂದಿಗೆ ಸಭೆ ನಡೆಸಿದರು. ಈ ವೇಳೆ ರೈತರು ನಾಲ್ಕು ಬೇಡಿಕೆಗಳನ್ನು ಸಲ್ಲಿಸಿದರು.
ಪ್ರತಿ ಎಕರೆಗೆ 3.50 ಕೋಟಿ ರೂ. ದರ ನಿಗದಿ ಮಾಡಬೇಕು. ಜಮೀನು ಕಳೆದುಕೊಂಡ ರೈತರ ಮಕ್ಕಳಿಗೆ ಕೆಲಸ ನೀಡಬೇಕು. ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ನೌಕರಿ ನೀಡಬೇಕು. ಯಾವ ಕಾರಣಕ್ಕೂ ಹಸಿರು ವಲಯವಾಗಿ ಪರಿವರ್ತಿಸಬಾರದು. ಅಕ್ಕಪಕ್ಕ ಉಳಿದ ಜಮೀನು ಹಳದಿ ವಲಯವಾಗಿ ಪರಿವರ್ತಿಸಬೇಕು ಎಂದು ರೈತರ ನಿಯೋಗ ಷರತ್ತು ವಿಧಿಸಿದೆ.


















