ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಿ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. 35 ವರ್ಷದ ದಾಸಣ್ಣ ಅಪಘಾತಕ್ಕೀಡಾಗಿದ್ದರು. ಜುಲೈ 9 ರಂದು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಹತ್ತಿರ ಈ ಘಟನೆ ನಡೆದಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಿದ್ದ ವೈದ್ಯರು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದಿದ್ದರು.
ಹೀಗಾಗಿ ಕುಟುಂಬಸ್ಥರು ದಾಸಣ್ಣನ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸರ್ಕಾರಕ್ಕೆ ಮಾಹಿತಿ ನೀಡಿ ಅಂಗಾಂಗ ದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.
ದಾಸಣ್ಣ ಮೂಲತಃ ಮೂಲತಃ ಪಾವಗಡದವರು. ಕೆಲಸದ ಹಿನ್ನೆಲೆಯಲ್ಲಿ ಕೆ.ಆರ್. ಪೇಟೆಗೆ ಹೋಗಿದ್ದ ವೇಳೆ ಬೈಕ್ ಅಪಘಾತಕ್ಕೆ ಬಲಿಯಾಗಿದ್ದಾರೆ.



















