5 ವರ್ಷ ಅಧಿಕಾರ ಗಟ್ಟಿಯಾಗುತ್ತಿದಂತೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ತವರು ಜಿಲ್ಲೆಯಲ್ಲಿ ಸಾಧನ ಸಮಾವೇಶ ಹೆಸರಿನಲ್ಲಿ ಜುಲೈ 19 ರಂದು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಆ ವೇಳೆ ಮೈಸೂರಿನ ಮಹರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಆಯೋಜನೆಗೊಂಡಿದೆ. ಸರ್ಕಾರದ ಸುಮಾರು 2,600 ಕೋಟಿ ರೂ. ಮೊತ್ತದ ಹಲವು ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಲೋಕಾರ್ಪಣೆ ನಡೆಯಲಿದೆ. ಬೃಹತ್ ಸಮಾವೇಶದ ಮೂಲಕ ಪಕ್ಷದ ಹೈ ಕಮಾಂಡ್ ಪರೋಕ್ಷ ಸಂದೇಶ ರವಾನಿಸಲಿದ್ದಾರೆ.
ಸಾಧನ ಸಮಾವೇಶ ಮೂಲಕ ಹಳೇ ಮೈಸೂರು ಭಾಗದಲ್ಲಿ ತನ್ನ ಶಕ್ತಿ ತೋರಿಸಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದು, ಸಮಾವೇಶದ ಸಂಪೂರ್ಣ ಜವಾಬ್ದಾರಿಯನ್ನು ಸಿಎಂ ಆಪ್ತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ನೋಡಿಕೊಳ್ಳಲಿದ್ದಾರೆ.


















