ಬೆಂಗಳೂರು: ಬ್ಯಾಂಕಿನಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯುವ ಉದ್ಯೋಗ ಹಿಡಿಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಭಾರತೀಯ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ (SIDBI Recruitment 2025) ಖಾಲಿ ಇರುವ 76 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್ 11 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ :
ಒಟ್ಟು ಹುದ್ದೆಗಳು- 76
ಅಸಿಸ್ಟಂಟ್ ಮ್ಯಾನೇಜರ್ (Grade A) : 50
ಮ್ಯಾನೇಜರ್ (Grade B): 26
ಬ್ಯಾಂಕಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ (Grade A) ಮತ್ತು ಮ್ಯಾನೇಜರ್ (Grade B) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾಣಿಸಲಾಗಿದೆ. ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳಲಾಗುತ್ತದೆ. ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂಬಿಎ, ಸಿಎ, ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು ಎಂಬ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಗ್ರೇಡ್ ಬಿ ಮ್ಯಾನೇಜರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
ಕನಿಷ್ಠ 21 ವರ್ಷದಿಂದ ಗರಿಷ್ಠ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. Grade A (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳಿಗೆ : 44,500 ರಿಂದ 89,150 ರೂ.ವರೆಗೆ ವೇತನ ನೀಡಲಾಗುತ್ತದೆ. Grade B (ಮ್ಯಾನೇಜರ್) ಹುದ್ದೆಗಳಿಗೆ 55,200 ರಿಂದ 99,750ರೂ. ವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 175 ರೂಪಾಯಿ ಹಾಗೂ ಒಬಿಸಿ, ಜನರಲ್ ಅಭ್ಯರ್ಥಿಗಳಿಗೆ 1,100 ರೂಪಾಯಿ ಅರ್ಜಿ ಶುಲ್ಕವಿದೆ. ಜುಲೈ 14ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸುವವರು https://www.sidbi.in/ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.