ಮನೆಯಲ್ಲಿದ್ದ ವೇಳೆ ಕುಸಿದು ಬಿದ್ದು 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತೊಟ್ಟಂನ ಅಶ್ವಿನ್ ಮತ್ತು ಸರಿತಾ ಡಿಸೋಜಾ ಎಂಬುವವರ ಪುತ್ರ ಕ್ಯಾಥಲ್ ಉಡುಪಿಯ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ. ಆದರೆ, ಜುಲೈ 15ರಂದು ಮನೆಯಲ್ಲಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೇಲ್ನೊಟಕ್ಕೆ ವಿದ್ಯಾರ್ಥಿಯು ಹೃದಯಾಘಾತಕ್ಕೆ ಬಲಿಯಾಗಿದ್ದಾನೆ ಎನ್ನಲಾಗಿದೆ.