ಭಾರತಕ್ಕೆ ಬಹುದೊಡ್ಡ ಗಂಡಾಂತರ ಕಾದಿದೆ. ವಿಶ್ವವೇ ತಿರುಗಿ ನೋಡುವ ಮಟ್ಟಿನ ಆಘಾತ ಎದುರಾಗಲಿದೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ ಎಂದು ಹೇಳಿದರು. ಮುಂದಾಗುವ ಸಮಸ್ಯೆಗಳನ್ನು ಅರಿತುಕೊಂಡು ಈಗಲೇ ಪರಿಹಾರ ಮಾಡಿಕೊಂಡರೆ ಸೂಕ್ತ. ಇಲ್ಲವಾದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದ್ದಾರೆ.
ಸಾಮಾನ್ಯವಾಗಿ ಯುಗಾದಿ ಮತ್ತು ಸಂಕ್ರಾಂತಿ ಸಂದರ್ಭದಲ್ಲಿ ಮುನ್ಸೂಚನೆ ಫಲಗಳನ್ನು ತಿಳಿಸಲಾಗುತ್ತದೆ. ಯುಗಾದಿ ಸಂದರ್ಭದಲ್ಲಿ ಮಳೆ, ಬೆಳೆ ಇತ್ಯಾದಿಗಳ ಬಗ್ಗೆ ಮುನ್ಸೂಚನೆ ನೀಡಲಾಗುತ್ತದೆ. ಸಂಕ್ರಾಂತಿ ಸಮಯದಲ್ಲಿ ಆಡಳಿತ, ರಾಜಕಾರಣ ಇತ್ಯಾದಿಗಳ ಫಲ ನೋಡಿಕೊಂಡು ಹೇಳುತ್ತೇವೆ. ಸಂಕ್ರಾಂತಿವರೆಗೆ ಏನು ತೊಂದರೆ ಇಲ್ಲ. ಆಮೇಲೆ, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೊಡಿ ಶ್ರೀ ಹೇಳಿದ್ದಾರೆ.


















