ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಸ್ಥಳಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಲಿ ಭೇಟಿ ನೀಡಿ, ಶೋಧ ಕಾರ್ಯ ಪರಿಶೀಲಿಸಿದ್ದಾರೆ.
ವರದಿಗಾರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಈ ದುರ್ಘಟನೆಯಲ್ಲಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಪತ್ತೆಕಾರ್ಯ ಚುರುಕುಗೊಳಿಸುವಂತೆ ಹಾಗೂ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ನಾನು, ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಶಾಸಕ ಗುರುರಾಜ ಗಂಟಿಹೊಳೆ ಅವರು ಸಚಿವರೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ.
ನಾಪತ್ತೆಯಾದ ಮೀನುಗಾರರ ದೇಹವಾದರೂ ಆದಷ್ಟು ಬೇಗ ಸಿಗಬೇಕಾಗಿದೆ. ಆ ನೆಲೆಯಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ನಾಳೆಯೊಳಗೆ ಪತ್ತೆಯಾಗದೇ ಇದ್ದರೆ ಸರಕಾರ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿ ಪತ್ತೆಕಾರ್ಯಕ್ಕೆ ವೇಗ ನೀಡಬೇಕು ಎಂದವರು ಹೇಳಿದ್ದಾರೆ.



















