ನಟ ದರ್ಶನ್ ಗೆ ಕೊಂಚ ರಿಲೀಫ್ ಸಿಕ್ಕಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಇದೀಗ ಜುಲೈ 22ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಜಾಮೀನು ರದ್ದು ಕೋರಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಂಧನಕ್ಕೆ ಸೂಕ್ತ ಕಾರಣ ನೀಡುವಂತೆ ಸೂಚಿಸಿ, ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.
ಇದಕ್ಕೂ ಮೊದಲು ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಬಂಧನಕ್ಕೂ ಮುನ್ನ ಪ್ರತ್ಯಕ್ಷದರ್ಶಿಗಳ ವಿಚಾರಣೆಯನ್ನು ಮಾಡಲಾಗಿಲ್ಲ ಎಂದು ವಾದಿಸಿದರು. ಹೀಗಾಗಿ ಸುಪ್ರೀಂಕೋರ್ಟ್ ಇದೀಗ ರಾಜ್ಯ ಸರ್ಕಾರಕ್ಕೆ ಬಂಧನದ ಕಾರಣವನ್ನು ತಿಳಿಸುವಂತೆ ಆದೇಶಿಸಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ನಟ ದರ್ಶನ್ ಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.



















