ಬೆಂಗಳೂರು: ಕರ್ನಾಟಕದ ಬೆಳಗಾವಿಯಲ್ಲಿ ಉದ್ಯೋಗ ಕಂಡುಕೊಳ್ಳಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುವವರಿಗೆ ಗುಡ್ ನ್ಯೂಸ್ ಇದೆ. ಎಚ್ ಎಲ್ ಎಲ್ ಲೈಫ್ ಲಿಮಿಟೆಡ್ ಕಂಪನಿಯಲ್ಲಿ (HLL Lifecare Recruitment 2025) ಖಾಲಿ ಇರುವ ಪ್ರೊಡಕ್ಷನ್ ಅಸಿಸ್ಟಂಟ್, ಲ್ಯಾಬ್ ಅನಾಲಿಸ್ಟ್, ಡಿಪ್ಲೋಮಾ ಟ್ರೈನೀಸ್ ಸೇರಿ 22 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಜುಲೈ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 22
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 30
ಉದ್ಯೋಗದ ಸ್ಥಳ: ಬೆಳಗಾವಿ
ವಿದ್ಯಾರ್ಹತೆ ಏನು?
ಡಿಪ್ಲೊಮಾ, ಐಟಿಐ, ಎಂಬಿಎ, ಬಿಇ ಅಥವಾ ಬಿ.ಟೆಕ್, ಬಿ.ಕಾಂ, ಎಂಬಿಎ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷ ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 12-29 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ,
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ https://lifecarehll.com/ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅರ್ಜಿಯ ನಮೂನೆ ಜತೆಗೆ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
General Manager (Operations) & Unit Chief, HLL Lifecare Limited, Kanagala – 591225, Hukkeri (Taluka), Belagavi (District), Karnataka