ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್ ಸಂಸ್ಥೆಯು 80 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬಿಸಿನೆಸ್ ಡೆವಲಪ್ ಮೆಂಟ್ ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 16ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 31 ಕೊನೆಯ ದಿನವಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 80
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 31
ಉದ್ಯೋಗದ ಸ್ಥಳ: ದೇಶಾದ್ಯಂತ (ಕರ್ನಾಟಕದಲ್ಲಿ 9)
ವಿದ್ಯಾರ್ಹತೆ ಏನು?
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಕರ್ನಾಟಕ ಸೇರಿ ದೇಶಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bankofbaroda.inಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅರ್ಜಿಯ ನಮೂನೆ ಜತೆಗೆ ಅಗತ್ಯ ದಾಖಲೆಗಳೊಂದಿಗೆ careers@bobcaps.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು



















