ಬೆಂಗಳೂರು: ಕೆಲಸಕ್ಕೆ ಹೋಗುತ್ತಿದ್ದ ವೇಳೆ ಯುವತಿ ಅಪಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಮಂಡ್ಯದ ತರೀಕೆರೆ ಮೂಲದ ಸುಮಾ (25) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ಸುಮಾ ಹೆಬ್ಬಾಳದ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಕೆಲಸಕ್ಕೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸುಮಾ ಮೂಲತಃ ಮಂಡ್ಯ ಜಿಲ್ಲೆಯವರು. ಆಸ್ಪತ್ರೆಯಲ್ಲಿ ಯುವತಿಯ ಶವವಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



















