ʼ
ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ನಾಗರೀಕರು ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ಮಾಡಿದ್ದಾರೆ.
ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದ್ದು, ಕೂಡಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯೆಂದು ಮರು ನಾಮಕರಣ ಮಾಡಿರುವುದನ್ನು ವಾಪಾಸ್ ಪಡೆಯಬೇಕು, ಇಲ್ಲವಾದಲ್ಲಿ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಉತ್ತರ ಜಿಲ್ಲೆಯಿಂದ ನಾಲ್ಕು ತಾಲ್ಲೂಕು ಅಭಿವೃದ್ಧಿಯಾಗಲ್ಲ. ರಿಯಲ್ ಎಸ್ಟೇಟ್ ಮಾಫಿಯಾಗೆ ಅನುಕೂಲ ಆಗುತ್ತಿದೆ. ರಾಜಕಾರಣಿಗಳು ನೂರಾರು ಎಕರೆ ಜಮೀನು ಖರೀದಿ ಮಾಡಿದ್ದಾರೆ. ಜಮೀನಿಗೆ ನೂರಾರು ಕೋಟಿ ಬೆಲೆ ಹೆಚ್ಚಳ ಮಾಡಿಕೊಳ್ಳುವ ಉದ್ದೇಶಿದಿಂದ ಬೆಂಗಳೂರು ಉತ್ತರ ಜಿಲ್ಲೆ ಎಂದು ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕಿನ ಜನರ ಅಭಿಪ್ರಾಯ ಸಂಗ್ರಹ ಮಾಡದೆ ಏಕಾಏಕಿ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ಹೊರ ಹಾಕಿದ್ದಾರೆ.