ಬೆಂಗಳೂರಿನ ಕೃಷ್ಣರಾಜೇಂದ್ರ ಮಾರುಕಟ್ಟೆ ಬಳಿ ಇರುವ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ಸಂಸ್ಥಾಪಕ ಜ್ಯೋತಿನಗರ ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟಿ ಅವರ 104ನೇ ವಾರ್ಷಿಕ ಆರಾಧನಾ ಮಹೋತ್ಸವ ಜು. 26ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 6ರಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 6ಕ್ಕೆ ಸಮಾಧಿ ಬಳಿ ಪೂಜೆ ನಡೆಯಲಿದೆ. ಬೆಳಗ್ಗೆ 9ಕ್ಕೆ ಜನೋಪಕಾರಿ ದೊಡ್ಡಣ್ಣ ಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ ಉದ್ಘಾಟನೆಗೊಳ್ಳಲಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಟ್ಟಡ ನಿರ್ಮಾಣದ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ ಪ್ರಶಸ್ತಿ ವಿತರಿಸಲಿದ್ದಾರೆ. ಅತಿಥಿಗಳಾಗಿ ಶಾಸಕರಾದ ಉದಯ ಗರುಡಾಚಾರ್, ಶರತ್ ಬಚ್ಚೇಗೌಡ, ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ರಾಜಶೇಖರ್ ಎಂ.ಆರ್, ಲಕ್ಷ್ಮೀ ನರಸಿಂಹ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಎಸ್ ಸೇರಿದಂತೆ ಭಾಗವಹಿಸಲಿದ್ದಾರೆ ಎಂದು ಧರ್ಮ ಸಂಸ್ಥೆಯ ಸದಸ್ಯ ಹಾಗೂ ವಕೀಲ ನಿರಂಜನ್ ಗಾಣಿಗ್ ಪ್ರಕಟಣೆಯಲ್ಲಿ ತಿಳಿಸಿ, ಸರ್ವರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.



















