ಚೆನ್ನೈ: ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ (Bengaluru-Salem Highway) ಭೀಕರ ಅಪಘಾತವೊಂದು ನಡೆದಿದ್ದು, ಮಗು ಸೇರಿದಂತೆ ಮೂವರು ಬಲಿಯಾಗಿರುವ ಘಟನೆ ನಡೆದಿದೆ.
ಸರಣಿ ಅಪಘಾತ ಸಂಭವಿಸಿದ ಪರಿಣಾಮ 7 ವರ್ಷದ ಮಗು ಸೇರಿದಂತೆ ಮೂವರು ಬಲಿಯಾಗಿದ್ದಾರೆ. ತಮಿಳುನಾಡಿನ (Tamil Nadu) ಕೃಷ್ಣಗಿರಿ ಜಿಲ್ಲೆಯ ಬೆಂಗಳೂರು-ಸೇಲಂ ಹೆದ್ದಾರಿಯಲ್ಲಿ ವಾಹನ ದಟ್ಟಣೆಯ ಹಿನ್ನೆಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 2 ಟ್ರಕ್, 2 ಕಾರು ಹಾಗೂ 1 ಬೈಕ್ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ 2 ಟ್ರಕ್‌ಗಳ ನಡುವೆ 2 ಕಾರು ಹಾಗೂ ಬೈಕ್ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿವೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 7 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.