ಮೈಸೂರು: ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ನಡೆದಿದೆ.
ಮೈಸೂರು ತಾಲೂಕಿನ ಮೀನಾಕ್ಷಿಪುರ ಹತ್ತಿರದ ಕೆಆರ್ಎಸ್ (KRS) ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಪ್ರಶಾಂತ್, ಸಿದ್ದ ಮತ್ತು ಕೃಷ್ಣ ನೀರುಪಾಲಾದ ದುರ್ದೈವಿಗಳು ಎನ್ನಲಾಗಿದೆ.
ಸಾವನ್ನಪ್ಪಿದವರನ್ನು ಮಂಡ್ಯದ (Mandya) ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.