ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಾಗಿರುವ ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ (Oil India Recruitment 2025) ಖಾಲಿ ಇರುವ 262 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರು ಕೂಡ ಅರ್ಜಿಗಳನ್ನು ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಅಧಿಸೂಚನೆ ಪ್ರಕಾರ, ಗ್ರೇಡ್-III, ಗ್ರೇಡ್-ವಿ ಮತ್ತು ಗ್ರೇಡ್-VII ಹುದ್ದೆಗಳನ್ನು ನೇಮಕಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೂ ಅವಕಾಶವಿದೆ. ಆಗಸ್ಟ್ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಆಯಿಲ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆ: 262
ಉದ್ಯೋಗ ಸ್ಥಳ: ಅರುಣಾಚಲ ಪ್ರದೇಶ, ಅಸ್ಸಾಂ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 18
ನೇಮಕಾತಿ ಹೊಂದಿದವರಿಗೆ ತಿಂಗಳಿಗೆ 26,600-1,45,000 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಗ್ರೇಡ್ III ವಿಭಾಗದಲ್ಲಿ 111, ಗ್ರೇಡ್ V ವಿಭಾಗದಲ್ಲಿ 16 ಹಾಗೂ ಗ್ರೇಡ್ VII ವಿಭಾಗದಲ್ಲಿ 135 ಹುದ್ದೆಗಳು ಖಾಲಿ ಇವೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಸಮುದಾಯದವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. 18ರಿಂದ 38 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://oilindia.com/ ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.



















