ರಾಜ್ಯ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಒಕ್ಕೂಟದ ವತಿಯಿಂದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಅವೈಜ್ಞಾನಿಕ ವಿದ್ಯುತ್ ಬಿಲ್, ಅವೈಜ್ಞಾನಿಕ ನಿಯಮಗಳು ಸೇರಿದಂತೆ ಕ್ರಷರ್ ಮಾಲೀಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲಾಗಿದೆ.
ಈ ಕುರಿತು ರಾಜ್ಯ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಒಕ್ಕೂಟದ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಲಾಯಿತು. ಈ ವೇಳೆ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಈಡೇರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಅಧಿಕಾರಿಗಳಿಂದ ಉದ್ಯಮಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಿದರು.



















