ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಆತಂಕ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದಲ್ಲಿ ಸದ್ಯ 2800ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,582 ಪ್ರಕರಣಗಳು ವರಿಯಾಗಿದ್ದರೆ, ಇನ್ನುಳಿದ ಜಿಲ್ಲೆಗಳಲ್ಲಿ ಒಟ್ಟಾರೆಯಾಗಿ 1,354 ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಮನೆ, ಕಚೇರಿಗಳ ಸುತ್ತಾಮುತ್ತಾ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.



















