ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಯುಪಿಐ ಮೂಲಕ ಹಣ ಸ್ವೀಕರಿಸುತ್ತಿರುವ ವರ್ತಕರಿಗೆ ತೆರಿಗೆ ನೋಟಿಸ್ ಜಾರಿಯಾಗುತ್ತಿದ್ದು, ಲಕ್ಷ ಲಕ್ಷ ತೆರಿಗೆ ನೋಟಿಸ್ ಕಂಡು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ಅಂಗಡಿ ಮಾಲೀಕರು, ಇಂದಿನಿಂದ ಹೋರಾಟಕ್ಕೆ ಸಜ್ಜಾಗಿದ್ದಾರೆ.
ಜಿಎಸ್ ಟಿ ಟ್ಯಾಕ್ಸ್ ನೋಟಿಸ್ ಗೆ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮತ್ತು ನಾಳೆ ಹಾಲು ಮಾರಾಟ ನಿಲ್ಲಿಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಸಣ್ಣ ಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಕೊಟ್ಟ ಬೆನ್ನಲ್ಲೇ ಇಂದಿನಿಂದ ಬೇಕರಿ ಕಾಂಡಿಮೆಂಟ್‌ಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ಬಳಕೆ ಮತ್ತು ಮಾರಾಟ ನಿಲ್ಲಿಸಲಾಗಿದೆ. ಹಲವು ಕಾಂಡಿಮೆಂಟ್, ಬೇಕರಿಗಳಲ್ಲಿ ಬೆಳಗ್ಗೆಯೇ ನೋ ಟೀ ಕಾಫಿ, ಓನ್ಲಿ ಲೆಮನ್ ಟೀ, ಬ್ಲ್ಯಾಕ್ ಟೀ ಎಂಬ ಬೋರ್ಡ್ ಗಳನ್ನು ಹಾಕಲಾಗಿದೆ.


















