ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮೂವರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಐಎಎಸ್ ಅಧಿಕಾರಿಗಳದ ವಾಸಂತಿ ಅಮರ್, ಬಾಗ್ಲಿ ಮಾರುತಿ, ಯರೆಪ್ಪ ರೆಡ್ಡಿ ಎಂಬುವವರ ಮನೆಗಳ ಮೇಲೆ ದಾಳಿ ನಡೆದಿದೆ. ವಾಸಂತಿ ಅಮರ್, ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯೆರಪ್ಪ ರೆಡ್ಡಿ, ಬಿಬಿಎಂಪಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿದ್ದಾರೆ. ಯೆರೆಪ್ಪ ರೆಡ್ಡಿ ಕಳೆದ ಕೆಲವು ದಿನಗಳ ಹಿಂದೆ 10 ಲಕ್ಷ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬಲೆಗೆ ಬಿದ್ದಿದ್ದರು. ಟೌನ್ ಪ್ಲಾನಿಂಗ್ ಸಹಾಯಕ ನಿರ್ದೇಶಕ ಬಾಗ್ಲಿ ಮಾರುತಿ ಮನೆಯಲ್ಲಿ ಕೂಡ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಟೀಮ್ ನಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.



















