ಬೆಂಗಳೂರು: ವಿಶ್ವ ಕುಂದಾಪ್ರ ಕನ್ನಡ ದಿನದ ಪ್ರಯುಕ್ತ ಕುಂದಾಪುರದ ಕನ್ನಡಿಗರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಭಾಶಯ ತಿಳಿಸಿದ್ದಾರೆ.
ಶುಭಾಶಯ ಕೋರಿ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಖಾತೆ ʼಎಕ್ಸ್ʼನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯೇಂದ್ರ, ‘ಕುಂದಾಪುರ ಕನ್ನಡ ‘ಭಾಷಿ ಅಲ್ಲ, ಬದ್ಕ್’ ಎಂದು ವಿಶಿಷ್ಟ ಸಂಸ್ಕೃತಿ ಆಚಾರ ವಿಚಾರಗಳ ಮೂಲಕ ತಮ್ಮ ಭಾಷೆ ಹಾಗೂ ಬದುಕನ್ನು ವಿಶ್ವಕ್ಕೆ ಪರಿಚಯಿಸಲು ಪ್ರತಿ ವರ್ಷ ಆಸಾಡಿ ಅಮಾವಾಸ್ಯೆಯಂದು ಕುಂದಾಪ್ರ ಕನ್ನಡ ದಿನವಾಗಿ ಆಚರಿಸುವ ಪ್ರೀತಿಯ ಮಾತುಗಳನ್ನಾಡುವ ಎಲ್ಲ ಕುಂದಾಪುರ ಕನ್ನಡಿಗರಿಗೆ ಶುಭಾಶಯಗಳು’ ಎಂದು ತಿಳಿಸಿದ್ದಾರೆ.