ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಕೂಡ ಬುಲಾವ್ ನೀಡಿ ಸಭೆ ನಡೆಸಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಸುರ್ಜೇವಾಲ ವಿರುದ್ಧ ಕಿಡಿ ಕಾರಿದೆ.
ತನ್ನ ಅಧಿಕೃತ ʼಎಕ್ಸ್ʼ ಖಾತೆಯ ಮೂಲಕ ಸುರ್ಜೆವಾಲ ಕಿಡಿಕಾರಿದ ಜೆಡಿಎಸ್, ʼವಸೂಲಿವಾಲʼ ಎಂದು ಕಟುವಾಗಿ ಟೀಕಿಸಿದೆ.
‘ವಸೂಲಿವಾಲಾ ಸುರ್ಜೇವಾಲ ಕೇವಲ ರಾಜ್ಯ ಉಸ್ತುವಾರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ? ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ಇಷ್ಟು ದಿನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ರಣದೀಪ್ ಸುರ್ಜೇವಾಲಾ, ಈಗ ಸೂಪರ್ ಸಿಎಂ ರೀತಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸುರ್ಜೇವಾಲಾಗೆ ಆ ಅಧಿಕಾರ ಕೊಟ್ಟವರು ಯಾರು? ಸರ್ಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯ ಎಂದು ಕಿಡಿ ಕಾರಿದೆ.