ಕೋವಿಡ್ ಟೆಸ್ಟ್ ಗೆ ದರ ಫಿಕ್ಸ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಸೇರಿದಂತೆ ಅದಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಟೆಸ್ಟ್ ಗೆ 1700 ರೂ. ಫೀಸ್ ನಿಗದಿ ಮಾಡಲಾಗಿದೆ.
ರಾಜ್ಯ ಸರ್ಕಾರ ನಿಗದಿ ಪಡಿಸಿದ ಹಣವನ್ನಷ್ಟೇ ಖಾಸಗಿ ಆಸ್ಪತ್ರೆಗಳು ಪಡೆಯಬೇಕು. ಕೋವಿಡ್, ಐಪಿಟಿ ಟೆಸ್ಟ್ ಗಳಿಗೆ ಸರ್ಕಾರ ನಿಗದಿ ಪಡಿಸಿದ ಹಣ ಪಡೆಯಬೇಕು. ಒಂದು ವೇಳೆ ಸರ್ಕಾರದ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.



















