ಬೆಂಗಳೂರು ಗ್ರಾಮಾಂತರ: ಖಾಸಗಿ ಶಾಲೆ ತೊರೆದು ಕನ್ನಡ ಶಾಲೆಗೆ ಬಂದ ಮಕ್ಕಳಿಗೆ ಹಳ್ಳಿಯ ರೈತ ಅಂಬರೀಷ್ ಪಾದ ಪೂಜೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರೇಮುದ್ದೆನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಸರ್ಕಾರಿ ಶಾಲೆ ಉಳಿಸಿ ಕನ್ನಡ ಬೆಳೆಸಿ ಅಭಿಯಾನಕ್ಕೆ ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜ ಅವರು ಚಾಲನೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಹಾಗೂ ನವಕರ್ನಾಟಕ ಯುವಶಕ್ತಿ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ,ಖಾಸಗಿ ಶಾಲೆ ತೊರೆದು ಕನ್ನಡ ಶಾಲೆಗೆ ಸೇರ್ಪಡೆಯಾಗಿರುವ 15 ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನ ಮಾಡಿದರು.
ಈ ಸಂಧರ್ಭದಲ್ಲಿ ಬಿಇಓ ಶಂಕರಯ್ಯ, ಎಸ್ ಡಿಎಂಸಿ ಅಧ್ಯಕ್ಷ ಕಾಂತರಾಜು ಸೇರಿದಂತೆ ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗಿಯಾಗಿದ್ದರು.