ಪುತ್ತೂರು: ವ್ಯಕ್ತಿಯೋರ್ವನ ಮೇಲೆ ಫೈನಾನ್ಸ್ ಕಂಪನಿ ಮ್ಯಾನೇಜರ್ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಘಟನೆ ನಡೆದಿದೆ.
ಪುತ್ತೂರಿನ ಉರ್ಲಾಂಡಿ ನಿವಾಸಿ ಹರೀಶ್ ಕುಮಾರ್ ಹೆಗ್ಡೆ (52) ಹಲ್ಲೆಗೊಳಗಾದ ವ್ಯಕ್ತಿ. ಹರೀಶ್ ಗೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಫೈನಾನ್ಸ್ ಕಂಪನಿಯ ಮ್ಯಾನೇಜರ್ ಪ್ರಸಾದ್ ಗೌಡ ಎಂಬಾತ ಸ್ಕ್ಯಾನಿಂಗ್ ಸ್ಟಿಕ್ ನಿಂದ ಹರೀಶ್ ಕುಮಾರ್ ತಲೆಗೆ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಹಲ್ಲೆಗೆ ಪ್ರಮುಖ ಕಾರಣ ತಿಳಿದು ಬಂದಿಲ್ಲ. ಸದ್ಯ ಹಲ್ಲೆ ನಡೆಸಿದ ಪ್ರಸಾದ್ ಗೌಡ ಕೂಡ ತನ್ನ ಮೇಲೆಯೂ ಹಲ್ಲೆ ನಡೆದಿದೆ ಎಂದು ಆರೋಪಿಸಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಪ್ರಕರಣ ಸಂಬಂಧ ಪುತ್ತೂರು ನಗರ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.



















