ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಲಕ್ಷಾಂತರ ರೂಪಾಯಿ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಐಸಿಎಂಆರ್- ನ್ಯಾಷನಲ್ ಇನ್ ಸ್ಟಿಟ್ಯೂಷನ್ ಆಫ್ ನ್ಯೂಟ್ರಿಷನ್ ಸಂಸ್ಥೆಯಲ್ಲಿ (ICMR NIN Assistant Recruitment 2025) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಹೈದರಾಬಾದ್ ನಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಷನ್ ಆಫ್ ನ್ಯೂಟ್ರಿಷನ್ ಸಂಸ್ಥೆಯಲ್ಲಿ ನಾಲ್ಕು ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ ಸ್ಟಿಟ್ಯೂಷನ್ ಆಫ್ ನ್ಯೂಟ್ರಿಷನ್
ಒಟ್ಟು ಹುದ್ದೆ: 04
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 14
ಕನಿಷ್ಠ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35,400 ರೂ.ನಿಂದ 1.12 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪಡೆದಿರುವ ಜತೆಗೆ ಬೇಸಿಕ್ ಕಂಪ್ಯೂಟರ್ ನಾಲೆಡ್ಜ್ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ. ಎಸ್ಸಿ, ಎಸ್ಟಿ, ಒಬಿಸಿ ವರ್ಗದವರಿಗೆ ಯಾವುದೇ ವಿನಾಯಿತಿ ನೀಡಿಲ್ಲ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು https://joinicmr.in/login/user ವೆಬ್ ಸೈಟ್ ಗೆ ಭೇಟಿ ನೀಡಬಹುದು.