ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ (NALCO Recruitment 2025) ಖಾಲಿ ಇರುವ 32 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಡೆಪ್ಯೂಟಿ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಸೇರಿ ಒಟ್ಟು 32 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜುಲೈ 25ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 11 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಅಲ್ಯುಮಿನಿಯಂ ಕಂಪನಿ
ಹುದ್ದೆಗಳ ಹೆಸರು: ಡೆಪ್ಯೂಟಿ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್
ಒಟ್ಟು ಹುದ್ದೆಗಳು: 32
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿ ಟೆಕ್, ಬಿ.ಇ, ಎಲ್ ಎಲ್ ಬಿ, ಡಿಪ್ಲೋಮಾ, ಎಂಎಸ್ಸಿ, ಎಂಇ, ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಗರಿಷ್ಠ 48 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಯಾರಿಗೆ ಎಷ್ಟು ಸಂಬಳ?
ಡೆಪ್ಯೂಟಿ ಜನರಲ್ ಮ್ಯಾನೇಜರ್- 1.2 ಲಕ್ಷ ರೂ.-2.8 ಲಕ್ಷ ರೂ.
ಸೀನಿಯರ್ ಮ್ಯಾನೇಜರ್- 90 ಸಾವಿರ ರೂ.-2.4 ಲಕ್ಷ ರೂ.
ಡೆಪ್ಯೂಟಿ ಮ್ಯಾನೇಜರ್- 70 ಸಾವಿರ ರೂ.-2 ಲಕ್ಷ ರೂ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್ ಸೈಟ್ ಆಗಿರುವ nalcoindia.co.in ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಜತೆಗೆ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.