ಬೆಂಗಳೂರು : ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಕೊರತೆ ಹೆಚ್ಚಾಗಿದೆ. ದಾವಣಗೆರೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಸರತಿ ಸಾಲಿನಲ್ಲಿ ನಿಂತು ಗೊಬ್ಬರವನ್ನು ಕೊಂಡುಕೊಳ್ಳುತ್ತಿದ್ದಾರೆ. ಆದರೆ ಅಗತ್ಯವಿರುವಷ್ಟು ಗೊಬ್ಬರ ಸಿಗದೆ ಹಿನ್ನೆಲೆ ಕೃಷಿ ಇಲಾಖೆ ಮತ್ತ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬೆನ್ನಲ್ಲೇ ಕೃಷಿ ಸಚಿವ ಚಲುವರಾಯಸ್ವಾಮಿ ರಾಜ್ಯದ ರೈತರಿಗೆ ಯೂರಿಯಾ ಗೊಬ್ಬರದ ಬದಲು ನ್ಯಾನೋ ಯೂರಿಯಾ ಬಳಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಅತ್ತಾ ಬಿಜೆಪಿ ಸಂಸದರ ನಿಯೋಗ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಅಗತ್ಯ ಗೊಬ್ಬರವನ್ನು ಪೂರೈಕೆ ಮಾಡುವಂತೆ ಸಚಿವ ಚೆಲುವನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.
ಸದ್ಯ ಶೀತಕ್ಕೆ ಬೆಳೆ ಹಾಳಾಗಬಾರದು ಎಂದು ಯೂರಯಾ ಗೊಬ್ಬರಕ್ಕೆ ಪಟ್ಟು ಹಿಡಿದಿರುವ ರೈತರಿಗೆ ಒಂದು ರೀತಿಯಲ್ಲಿ ಬೆಳೆಯನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ.