ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗೊಬ್ಬರ ನೀಡುತ್ತಿಲ್ಲ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಕೇಂದ್ರದಿಂದ ಗೊಬ್ಬರ ಬಂದಿಲ್ಲವೆಂದು ಹೇಳಿದ್ದಾರೆ. ಕೂಡಲೇ ರೈತರಿಗೆ ಗೊಬ್ಬರ ಕೊಡಬೇಕು. ನಮ್ಮ ರೈತರಿಗೂ ಒಳ್ಳೆಯದಾಗಬೇಕು ಎಂದಿದ್ದಾರೆ.
ಬಿಜೆಪಿ ಅವರು ಯಾಕೆ ಪ್ರತಿಭಟನೆ ಮಾಡುತ್ತಾರೆ. ಅವರು ನಮ್ಮ ಮೇಲೆ ಯಾಕೆ ಆರೋಪ ಮಾಡುತ್ತಾರೆ. ಗೊಬ್ಬರ ಅವರ ಬಳಿಯೇ ಇದೆ ಅವರೇ ಕೊಡಬೇಕು ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.



















