ಸಿದ್ದಾಪುರ/ಉಡುಪಿ : ನ್ಯಾಯಾಲಯಕ್ಕೆ ಹಾಜರಾಗದೇ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅಮಾಸೆಬೈಲು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಶೋಕ ಕುಮಾರ್ ನೇತೃತ್ವದ ತಂಡ ಪತ್ತೆ ಮಾಡಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
2004ರಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಒಬ್ಬ ಆರೋಪಿ ಕಾಸರಗೋಡು ಜಿಲ್ಲೆಯ ಮೊಗ್ರಾಲು ಪುತ್ತೂರು ನಿವಾಸಿ ಫಾರೂಕ್ 2004ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ ಗೌಡ ನಿರ್ದೇಶನದಂತೆ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ್ ಕುಮಾರ್ ಹಾಗೂ ಚಂದ್ರ ಎ.ಕೆ. ಕಾರ್ಯಾಚರಣೆ ನಡೆಸಿ ಜು. 28ರಂದು ಆರೋಪಿಯನ್ನು ರಾಮನಗರ ಜಿಲ್ಲೆ ಮಾಗಡಿಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ



















