ಬೆಂಗಳೂರು: ಬೈಕ್ ಸವಾರನೊಬ್ಬ ಕಾರು ಹಾಗೂ ಬಿಎಂಟಿಸಿ ಬಸ್ ನಡುವೆ ನುಗ್ಗಿ ಬಂದು ಬಿದ್ದು ಸಿನಿಮೀಯ ಶೈಲಿಯಲ್ಲಿ ಪಾರಾಗಿರುವ ಘಟನೆ ಹೆಚ್ ಎಸ್ ಆರ್ ಲೇಔಟ್ ನ 24ನೇ ಮುಖ್ಯರಸ್ತೆಯಲ್ಲಿ ನಡೆದಿದೆ.
ಬೈಕ್ ಸವಾರ ಓವರ್ ಟೇಕ್ ಮಾಡಿಕೊಂಡು ಬಂದು ಬಿಎಂಟಿಸಿ ಬಸ್ ಗೆ ಢಿಕ್ಕಿ ಹೊಡೆದ ರಭಸಕ್ಕೆ ನಿತಂತ್ರಣ ತಪ್ಪಿ, ಬಸ್ಸಿನ ಚಕ್ರದಡಿ ಬೀಳುವುದರಿಂದ ಅದೃಷ್ಟವಶಾತ್ ಪಾರಾಗಿರುವ ದೃಶ್ದ ಕಾರಿನ ಡ್ಯಾಶ್ ಕ್ಯಾಮರದಲ್ಲಿ ಸೆರೆಯಾಗಿದೆ.
ಬಳಿಕ ಬೈಕ್ ಸವಾರ ಬಿಎಂಟಿಸಿ ಬಸ್ ಸಿಬ್ಬಂದಿಗಳ ವಿರುದ್ಧ ಸಿಡಿದೆದ್ದಿದ್ದಾನೆ ಎಂದು ತಿಳಿದು ಬಂದಿದೆ.