ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡ ಮಂಗಳೂರು ನಗರದಲ್ಲಿ ಕಚೇರಿಯನ್ನು ಪ್ರಾರಂಭಿಸಿದೆ.
ಈ ಪ್ರಕರಣದ ಕುರಿತಾಗಿ ಎಸ್‌ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಸಹಾಯವಾಣಿಯನ್ನೂ ಪ್ರಾರಂಭಿಸಲಾಗಿದೆ.
ಮಂಗಳೂರು ನಗರದಲ್ಲಿ ಹೊಸದಾಗಿ ತೆರೆದ ಎಸ್‌ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ).
ದೂರವಾಣಿ ಸಂಖ್ಯೆ: 0824-2005301


















