ಕಾರವಾರ : ಮೀನುಗಾರಿಕೆಗೆ ತೆರಳಿದ್ದ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದರು.
ಇವತ್ತು ಸ್ಥಳಕ್ಕೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೀನುಗಾರರಿಗೆ ಸಚಿವ ಮಂಕಾಳ ವೈದ್ಯ ಧೈರ್ಯ ತುಂಬಿದ್ದಾರೆ.
ನಾಪತ್ತೆಯಾದ ಮೀನುಗಾರರ ಶೋಧನ ಕಾರ್ಯ ನಿರಂತರವಾಗಿರಿಸಲು ಸಂಬಂಧಿಸಿದವರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಬುದವಾರ ಸಂಜೆ ವೇಳೆಗೆ ಭಟ್ಕಳದ ಅಳ್ವೆಕೋಡಿಯಲ್ಲಿ ದೋಣಿ ಮಗುಚಿ ಬಿದ್ದು ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದರು.



















