ಶಾಸಕ ಪ್ರಭು ಚವ್ಹಾಣ್ ಪುತ್ರ ಪ್ರತೀಕ್ ಚವ್ಹಾಣ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನಿರೀ0ಕ್ಷಣಾ ಜಾಮೀನು ಅರ್ಜಿಯನ್ನು ಬೀದರ್ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಅರ್ಜಿ ವಜಾಗೊಳಿಸಿ ನ್ಯಾಯಾಧೀಶರಾದ ಕೋಮಲಾ ಆದೇಶ ಹೊರಡಿಸಿದ್ದಾರೆ. ಸಂತ್ರಸ್ತ ಯುವತಿಯ ಪರ ತಕರಾರು ಅರ್ಜಿಯನ್ನು ವಕೀಲ ಕೇಶವ್ ಶ್ರೀಮಾಳೆ ಸಲ್ಲಿಸಿದ್ದರು.