ಇಂದಿನಿಂದ ಸಿಲಿಕಾನ್ ಸಿಟಿ ಮಂದಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿ ಪರಿಷ್ಕೃತ ಆಟೋ ಪ್ರಯಾಣ ದರ ಇಂದಿನಿಂದಲೇ ಜಾರಿಯಾಗಿದೆ. ಮಿನಿಮಮ್ ಆಟೋ ಪ್ರಯಾಣ ದರ 30ರಿಂದ 36 ರೂ.ಗೆ ಏರಿಕೆಯಾಗಿದೆ. ನಂತರದ ಪ್ರತಿ ಕಿ.ಮೀ.ಗೆ 18 ರೂಪಾಯಿ ನಿಗದಿ ಮಾಡಲಾಗಿದೆ. ಎರಡು ಕಿ.ಮೀ. ಮಿನಿನಮ್ ದರ 6 ರೂಪಾಯಿಗೆ ಹೆಚ್ಚಿಸಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ಒನ್ ಆ್ಯಂಡ್ ಆಫ್ ಚಾರ್ಜ್ ಅಂದ್ರೆ, ಸಾಮಾನ್ಯ ದರ + ಸಾಮಾನ್ಯ ದರದ ಅರ್ಧಪಟ್ಟು ಹೆಚ್ಚು ನಿಗದಿ ಪಡಿಸಲಾಗಿದೆ. ಈ ಮೂಲಕ ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.



















