ಚಾಮರಾಜನಗರ: ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಇಂದು (ಆ.1) ವಿಧಿವಶರಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗ್ರಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ರಾಜ್‌ಕುಮಾರ್ ತಲೆಮಾರಿನ ಕೊನೆಯ ಹಿರಿಯ ಸದಸ್ಯೆಯಾಗಿದ್ದ ಇವರು ಇಂದು ತಮ್ಮ 92ನೇ ವಯಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಪುನೀತ್ ರಾಜ್ ಕುಮಾರ್ ತೀರಿಕೊಂಡಿರುವ ವಿಷಯವನ್ನು ಅವರಿಗೆ ಕುಟುಂಬಸ್ಥರು ತಿಳಿಸಿರಲಿಲ್ಲ. ಪುನೀತ್ ರಾಜ್ ಕುಮಾರ್ ತೀರಿ ವರ್ಷವಾದರೂ ಅವರು ಪುನೀತ್ ಬಗ್ಗೆ ಮಾತನಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದೆರಡು ವರ್ಷಗಳ ಹಿಂದೆ ವೈರಲ್ ಆಗಿತ್ತು.