ಬೆಂಗಳೂರು : ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಈ ಬೆನ್ನಲ್ಲೇ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಈ ಸಂಬಂಧಿಸಿದಂತೆ ಪೋಸ್ಟೊಂದನ್ನು ಹಂಚಿಕೊಂಡಿದ್ದಾರೆ.
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಅಧಿಕೃತ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ, ಪ್ರಜ್ವಲ್ ಅತ್ಯಾಚಾರ ಪ್ರಕರಣದ ಸಂಬಂಧ ಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜೊತೆಗೆ “ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ” ಎಂದು ಬರೆದುಕೊಂಡಿದ್ದಾರೆ.
ಸದ್ಯ, ಕೋರ್ಟ್ ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ನಾಳೆಗೆ ಕಾಯ್ದಿರಿಸಿದೆ.