ಬೆಂಗಳೂರು : ಕರಿಯ ಚಲನ ಚಿತ್ರದ ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಸಂತೋಷ್ ಬಾಲರಾಜ್ (38) ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಜಾಂಡೀಸ್ ನಿಂದ ತೀವ್ರ ಬಳಲುತ್ತಿದ್ದ ಸಂತೋಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಚಿಕಿತ್ಸೆಯ ಬಳಿಕ ಗುಣಮುಖರಾಗಿ ಮನೆಗೆ ಮರಳಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ. ಸದ್ಯ, ಅವರನ್ನು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೊಲೋ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಇದೆ.
ಸಂತೋಷ್ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಗಣಪ, ಕರಿಯ-2, ಕೆಂಪ, ಬರ್ಕ್ಲೀ ಚಿತ್ರಗಳಲ್ಲಿ ನಟಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ನಟನೆಯ ಸತ್ಯ ಚಿತ್ರ ಇನ್ನಷ್ಟೇ ಬಿಡುಗಡೆಗೊಳ್ಳಬೇಕಿದೆ. ತಂಗಿ ಹಾಗೂ ತಾಯಿಯ ಜೊತೆ ಸಂತೋಷ್ ವಾಸವಾಗಿದ್ದರು. ತಾಯಿ ಕೂಡ ಅನಾರೋಗ್ಯದಿಂದ ಓಡಾಡುವ ಸ್ಥಿತಿಯಲ್ಲಿಲ್ಲ ಎನ್ನಲಾಗಿದೆ.