ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ತೀರ್ಪು ಪ್ರಕಟಿಸಿ ಜೀವಾವಧಿ ಶಿಕ್ಷೆ ಹಾಗೂ 11.60 ಲಕ್ಷ ರೂ. ದಂಡ ವಿಧಿಸಲಾಗಿದೆ. ಈಗ ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣಗೆ ಜೈಲು ಆಧೀಕ್ಷಕರು 15528 ಸಜಾಬಂಧಿ ಖೈದಿ ಸಂಖ್ಯೆಯನ್ನು ನೀಡಿದ್ದಾರೆ.
ಏನಿದು ಪ್ರಕರಣ?
ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಚಾರ ಎಸಗಲಾಗಿದೆ ಎಂದು ಸಂತ್ರಸ್ತ ಮಹಿಳೆ 2024ರ ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಅವರು ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಈ ತಂಡದ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2,000 ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 2024ರ ಅಂತ್ಯದಲ್ಲಿ ಈ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.



















