ಬೆಂಗಳೂರು: ಕೆನರಾ ಬ್ಯಾಂಕ್ ಅಧೀನದಲ್ಲಿ ಕಾರ್ಯನಿರ್ವಹಿಸುವ, ವಸತಿ ಹಣಕಾಸು ಸೌಲಭ್ಯ ಒದಗಿಸುವ ಕ್ಯಾನ್ ಫೀನ್ ಹೋಮ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಚೀಫ್ ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿಯೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕ್ಯಾನ್ ಫೀನ್ ಹೋಮ್ಸ್
ಒಟ್ಟು ಹುದ್ದೆಗಳು: ನಮೂದಿಸಿಲ್ಲ
ಹುದ್ದೆಗಳ ಹೆಸರು: ಚೀಫ್ ಮ್ಯಾನೇಜರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 8
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಫೈನಾನ್ಸ್ ಆ್ಯಂಡ್ ಅಕೌಂಟ್ಸ್, ರಿಸ್ಕ್ ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಚೀಫ್ ಮ್ಯಾನೇಜರ್ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಿಎ, ಸಿಎಂ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸೋದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ಸೈಟ್ canfinhomes.com ಗೆ ಭೇಟಿ ನೀಡಿ
- ಮುಖ್ಯ ವ್ಯವಸ್ಥಾಪಕ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕಕ್ಕೂ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.