ಬೆಂಗಳೂರು: ನೀವು ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಸುರಕ್ಷತೆಯ ಉದ್ಯೋಗ ಹಿಡಿದು ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಒಳ್ಳೆಯ ಅವಕಾಶವಿದೆ. ಕೇಂದ್ರ ಸರ್ಕಾರದ ಒಡೆತನದಲ್ಲಿರುವ ದಿ ಓರಿಯಂಟಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (OICL Assistant Recruitment 2025) ನಲ್ಲಿ ಖಾಲಿ ಇರುವ 500 ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 17 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ದಿ ಓರಿಯಂಟಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು: ಅಸಿಸ್ಟಂಟ್ (ಗ್ರೇಡ್ 3)
ಒಟ್ಟು ಹುದ್ದೆಗಳು: 500
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 17
ದೇಶಾದ್ಯಂತ ಇರುವ ಕಚೇರಿಗಳಲ್ಲಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿಯೂ 47 ಹುದ್ದೆಗಳು ಖಾಲಿ ಇವೆ. ನೇಮಕಾತಿ ಹೊಂದಿದವರಿಗೆ ಮಾಸಿಕ 62 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪ್ರಾದೇಶಿಕ ಭಾಷಾ ಪರೀಕ್ಷೆಯನ್ನೂ ನಡೆಸಲಾಗುತ್ತದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್, ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ. ಕನಿಷ್ಠ 21 ವರ್ಷದವರಿಂದ 30 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು https://orientalinsurance.org.in/careers ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.


















