ಬೆಂಗಳೂರು : ರಾಜ್ಯದಲ್ಲಿ ಭಾರೀ ಹೋರಾಟಕ್ಕೆ ಕಾರಣವಾಗಿದ್ದ ಒಳಮೀಸಲಾತಿ ವರದಿ ಕೊನೆಗೂ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ದಲಿತ ಸಮುದಾಯದ ಒಳ ಪಂಗಡಗಳಿಗೆ ಮೀಸಲಾತಿ ನೀಡುವ ನಿಟ್ಟಿನಲ್ಲಿ ಈ ವರದಿ ಮಹತ್ವ ಪಡೆದುಕೊಂಡಿದೆ.
ಇಂದು(ಸೋಮವಾರ) ವಿಧಾನಸೌಧದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ 1766 ಪುಟಗಳ ವರದಿಯನ್ನು ನೀಡಿದ್ದಾರೆ. ಇದರಲ್ಲಿ ಆರು ಶಿಫಾರಸ್ಸುಗಳು ಒಳಗೊಂಡಿವೆ.
“ಒಳಮೀಸಲಾತಿ ವರದಿಯಲ್ಲಿ ಏನಿದೆ ?”
*ಒಳಮೀಸಲಾತಿ ಬೇಕೆಂದು ನ್ಯಾಯಾಲಯಗಳ ಒಳಗೆ ಮತ್ತು ಹೊರಗೆ 30 ವರ್ಷಗಳ ಹೋರಾಟ.
*ಸರ್ವೋಚ್ಚ ನ್ಯಾಯಾಲಯ ದಿನಾಂಕ 01-08-2024 ರಂದು ದವಿಂದರ್‌ಸಿಂಗ್ ಪ್ರಕರಣದ ತೀರ್ಪಿನಲ್ಲಿ ಸ್ಪಷ್ಟನೆ.
*ಉಪವರ್ಗೀಕರಣ ಮಾಡುವುದಕ್ಕೆ ಸಂವಿಧಾನ ದ ಅನುಚ್ಛೇದ 14 ರಲ್ಲಿ ಅವಕಾಶವಿದೆ.
*ಉಪವರ್ಗೀಕರಣ ಸಾಮಾಜಿಕ ನ್ಯಾಯದ ವಿಸ್ತರಣೆ.ರಾಜ್ಯ ಸರ್ಕಾರಕ್ಕೆ ಒಳಮೀಸಲಾತಿ ನೀಡುವ ಅಧಿಕಾರವಿದೆ.
*ಉಪವರ್ಗೀಕರಣ ಮಾಡಿದರೆ ಮೀಸಲಾತಿ ಅನುಭವಿಸುತ್ತಿರುವ ಯಾರನ್ನೂ ಹೊರಗಿಡುವುದಿಲ್ಲ.
*ಅಗತ್ಯ ದತ್ತಾಂಶ ಸಂಗ್ರಹಿಸಿ ಒಳಜಾತಿಗಳ ವರ್ಗೀಕರಣ ಮಾಡಬೇಕು ಎಂದು ಉಲ್ಲೇಖ.
“ವರದಿಯಲ್ಲಿರುವ ಪ್ರಮುಖ ಅಂಶಗಳು?”
*ಶೈಕ್ಷಣಿಕ ಹಿಂದುಳಿದಿರುವಿಕೆ.
*ಸರ್ಕಾರಿ ಉದ್ಯೋಗದಲ್ಲಿ ಅಗತ್ಯ ಪ್ರಾತಿನಿಧ್ಯದ ಕೊರತೆ.
*ಸಾಮಾಜಿಕ ಹಿಂದುಳಿದಿರುವಿಕೆ
*ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮತ್ತು ಸರ್ಕಾರದ ಸಂಸ್ಥೆ ಗಳಿಂದ ಸಂಗ್ರಹಿಸಿದ ದತ್ತಾಂಶವನ್ನು ವಿಶ್ಲೇಷಿಸಿ, ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಪರಿಶಿಷ್ಟ ಜಾತಿಯ ಒಳಜಾತಿಗಳನ್ನು ವರ್ಗೀಕರಿಸಿ ಲಭ್ಯವಿರುವ ಮೀಸಲಾತಿಯನ್ನು ಹಂಚಲಾಗಿದೆ.
*ವರದಿ,ಸಮೀಕ್ಷೆಯ ದತ್ತಾಂಶ ಮತ್ತು ಅನುಬಂಧ ಗಳು ಒಟ್ಟು ಸೇರಿ ಸುಮಾರು 1766 ಪುಟಗಳು ಮತ್ತು ಆರು ಶಿಫಾರಸ್ಸು ಗಳನ್ನೊಳಗೊಂಡ ವರದಿಯನ್ನು ನೀಡಿದೆ.
*ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ರವರು ಯಾವುದೇ ರೀತಿಯ ಸಂಭಾವನೆ ಪಡೆದುಕೊಂಡಿಲ್ಲ.



















