ಬೆಂಗಳೂರು : ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಹಿನ್ನಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ʼಮತಗಳ್ಳತನʼದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧರಿಸಿತ್ತು. ಕಾಂಗ್ರೆಸ್ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಂಡಿತ್ತು. ರಾಹುಲ್ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರತಿಭಟನೆಯ ಬಳಿಕ ಚುನಾವಣಾ ಆಯೋಗಕ್ಕೆ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ದೂರು ಸಲ್ಲಿಸುವುದಕ್ಕೂ ತಯಾರಾಗಿತ್ತು. ಈಗ ಜಾರ್ಖಾಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನರಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಘೋಷಿಸಿದ್ದಾರೆ.


















