ಬೆಂಗಳೂರು: ನೊಬೆಲ್ ಪ್ರಶಸ್ತಿ ಪುರಸ್ಕೃತ ಸಿ.ವಿ. ರಾಮನ್ ಅವರು ಸ್ಥಾಪಿಸಿರುವ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿ ಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಮನ್ ಸಂಶೋಧನಾ ಸಂಸ್ಥೆ
ಹುದ್ದೆಗಳ ಹೆಸರು: ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್
ಒಟ್ಟು ಹುದ್ದೆಗಳು: ಪ್ರಸ್ತಾಪ ಮಾಡಿಲ್ಲ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಆಗಸ್ಟ್ 2ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದೆ. ಡಿಸೆಂಬರ್ 31ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪಿಎಚ್.ಡಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಮೊದಲಿಗೆ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 1.08 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು https://www.rri.res.in/ ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















