ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು ಸಂಚಾರ ಸೇರಿದಂತೆ 3 ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆ.10ರಂದು ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ನಡುವೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಪ್ರಾರಂಭಿಸಲಿವೆ.
ಈ ಹಿಂದೆ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು-ಬೆಳಗಾವಿ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ತಾವೇ ಖುದ್ದು ಈ ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ .


















