ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಸರ್ಕಾರಿ ಜಮೀನು ಒತ್ತುವರಿ (Encroachment Of Government Land) ಆರೋಪ ಕೇಳಿ ಬಂದಿದ್ದು, ಈ ಪ್ರಕರಣದ ವಿಚಾರಣೆ ಆಗಸ್ಟ್ 28ಕ್ಕೆ ಮುಂದೂಡಿಕೆಯಾಗಿದೆ.
ರಾಜ್ಯ ಸರ್ಕಾರದ ಎಸ್‌ಐಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಆಗಸ್ಟ್ 28ಕ್ಕೆ ಹೈಕೋರ್ಟ್ ಮುಂದೂಡಲಾಗಿದೆ. ಈ ವಿಷಯವಾಗಿ ಸಮಾಜ ಪರಿವರ್ತನಾ ಸಮುದಾಯ ಮಧ್ಯ ಪ್ರವೇಶ ಕೋರಿ ಅರ್ಜಿ ಸಲ್ಲಿಸಿತ್ತು. ವಾದ -ವಿವಾದದ ವೇಳೆ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ಸರ್ಕಾರದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ ಕೋರ್ಟ್‌ಗೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ವಿಸ್ತರಿಸಿ ಆಗಸ್ಟ್ 28ಕ್ಕೆ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿತು.


















