ಉತ್ತರಾಖಂಡ:ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಜನ-ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಧರಾಲಿಯ (Dharali Floods) ನಂತರ ಮತ್ತೆ ಉತ್ತರಕಾಶಿ ಜಿಲ್ಲೆಯ ಸುಖಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಉತ್ತರಾಖಂಡದ ಉತ್ತರಕಾಶಿಯ (Uttarkashi Cloudburst) ಸುಖಿ ಟಾಪ್‌ನಲ್ಲಿ ತೀವ್ರ ಮೇಘಸ್ಫೋಟ ಸಂಭವಿಸಿದ್ದು, ಹಲವಾರು ಮನೆಗಳಿಗೆ ದೊಡ್ಡ ಹಾನಿ ಉಂಟಾಗಿದೆ.
ಪರಿಣಾಮವಾಗಿ ಮಣ್ಣು ಕುಸಿತ ಸಂಭವಿಸಿದೆ. ಧರಾಲಿಯ ನಂತರ, ಇಂದು ಮಧ್ಯಾಹ್ನ ಉತ್ತರಕಾಶಿ ಜಿಲ್ಲೆಯ ಸುಖಿ ಟಾಪ್‌ನಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಹಲವಾರು ಮನೆಗಳು ಹಾನಿಗೊಳಗಾಗಿವೆ ಅಥವಾ ಕೆಸರಿನ ನೀರಿನಲ್ಲಿ ಕೊಚ್ಚಿ ಹೋಗಿವೆ. ಸಾಕಷ್ಟು ಮನೆಗಳು, ಹೋಟೆಲ್ ಗಳು ಮತ್ತು ಅಂಗಡಿಗಳು ಸಂಪೂರ್ಣವಾಗಿ ನಾಶವಾಗಿವೆ ಎನ್ನಲಾಗಿದೆ.



















